ಗಂಧರ್ವ ಹರೀತಕಿ ವಟಿ (ಮಾತ್ರೆಗಳು)
ಅ. ಗುಣಧರ್ಮ ಮತ್ತು ಆಗಬಹದಾದ ಉಪಯೋಗ
ಇದು ಒಂದು ಪ್ರಸಿದ್ಧ ವಿರೇಚಕವಾಗಿದೆ (ಹೊಟ್ಟೆ ಶುದ್ಧಿಗಾಗಿ). ರೋಗಗಳಲ್ಲಿನ ಇದರ ಉಪಯೋಗವನ್ನು ಮುಂದೆ ಕೊಡಲಾಗಿದೆ; ಆದರೆ ಪ್ರಕೃತಿ, ಪ್ರದೇಶ, ಋತು ಮತ್ತು ವ್ಯಕ್ತಿಗಿರುವ ಇತರ ರೋಗಗಳಿಗನುಸಾರ ಉಪಚಾರದಲ್ಲಿ ಬದಲಾವಣೆ ಆಗಬಹುದು. ಆದ್ದರಿಂದ ಔಷಧಿಯನ್ನು ವೈದ್ಯರ ಸಲಹೆಗನುಸಾರವೇ ತೆಗೆದುಕೊಳ್ಳಬೇಕು.
| ಉಪಯೋಗ | ಔಷಧಿಯನ್ನು ಸೇವಿಸುವ ಪದ್ಧತಿ | ಅವಧಿ |
|---|---|---|
| ಮಲಬದ್ಧತೆ, ಮಲ ಗಟ್ಟಿಯಾಗುವುದು, ಹೊಟ್ಟೆಯಲ್ಲಿ ಗ್ಯಾಸ್ (ವಾಯು), ಹೊಟ್ಟೆ ಜಡತ್ವ, ವಾಕಾರಿಕೆ ಬಂದಂತಾಗುವುದು, ಆ್ಯಸಿಡಿಟಿ, ಕಾಮಾಲೆ, ಸಂಧಿವಾತ, ಸೊಂಟನೋವು, ಸಾಯಾಟಿಕಾ, ಮೊಣಕಾಲು (ಮಂಡಿ) ನೋವು | ದಿನದಲ್ಲಿ 1-2 ಬಾರಿ 2-4 ಮಾತ್ರೆಗಳನ್ನು ಬಿಸಿ ನೀರಿನೊಂದಿಗೆ ಸೇವಿಸಬೇಕು ಮತ್ತು ನಂತರ 1 ಗಂಟೆ ಏನನ್ನೂ ತಿನ್ನಬಾರದು-ಕುಡಿಯಬಾರದು. | 1 ತಿಂಗಳು |
ಆ. ಸೂಚನೆ

1. 8 ರಿಂದ 14 ವಯಸ್ಸಿನ ಮಕ್ಕಳು ಹಿರಿಯರ ಅರ್ಧ ಪ್ರಮಾಣದಲ್ಲಿ ಮತ್ತು 3 ರಿಂದ 7 ವಯಸ್ಸಿನ ಮಕ್ಕಳು ಹಿರಿಯರ ಕಾಲು ಪ್ರಮಾಣದಲ್ಲಿ ಔಷಧಿಯ ಚೂರ್ಣವನ್ನು ತೆಗೆದುಕೊಳ್ಳಬೇಕು.
2. ಮಾತ್ರೆಗಳನ್ನು ಜಗಿದು ಅಥವಾ ಚೂರ್ಣ ಮಾಡಿ ಸೇವಿಸಿದರೆ ಅದರ ಪರಿಣಾಮ ಹೆಚ್ಚಾಗುವುದು.
– ವೈದ್ಯ ಮೇಘರಾಜ ಮಾಧವ ಪರಾಡಕರ, ಸನಾತನ ಆಶ್ರಮ, ರಾಮನಾಥಿ, ಗೋವಾ. (11.6.2021)
ಮಳೆಗಾಲದಲ್ಲಾಗುವ ನೆಗಡಿ, ಕೆಮ್ಮು, ಜ್ವರ ಇವುಗಳಿಗೆ ಉಪಯುಕ್ತ ಆಯುರ್ವೇದದ ಔಷಧಿಗಳು
ಮಳೆಗಾಲದಲ್ಲಿನ ರೋಗಗಳ ಮೇಲೆ ಉಪಯುಕ್ತ ಆಯುರ್ವೇದದ ಔಷಧಿಗಳು
ಕುಟಜ ಘನವಟಿ (ಮಾತ್ರೆಗಳು)
ಚಂದ್ರಾಮೃತ ರಸ (ಮಾತ್ರೆಗಳು)
ಲಶುನಾದಿ ವಟಿ (ಮಾತ್ರೆ)
ಸೂತಶೇಖರ ರಸ (ಮಾತ್ರೆಗಳು)